6:19 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ

25/07/2021, 18:44

ಸುರತ್ಕಲ್(reporterkarnataka news): ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಕಾಟಿಪಳ್ಳ ,ಶಿರಡಿ ಸಾಯಿ ಫ್ರೆಂಡ್ಸ್ ಪುಚ್ಚಾಡಿ ಸೂರಿಂಜೆ, ಕೇಸರಿ ಬಳಗ ಸೂರಿಂಜೆ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಸರಕಾರಿ ಪ್ರೌಢ ಶಾಲೆ ಕೋಟೆ ಸೂರಿಂಜೆಯಲ್ಲಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಜರುಗಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ಮುಲ್ಕಿ- ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಹದಲ್ಲಿ ಚೈತನ್ಯ ಇರುವಾಗಲೇ 

ರಕ್ತದಾನ ಮಾಡಲು ಪ್ರತಿಯೊಬ್ಬರು ಮುಂದಾಗಬೇಕು. ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದ ಮೂಲಕ ಒಬ್ಬರ ಪ್ರಾಣವನ್ನು ಉಳಿಸಲು ಸಾಧ್ಯ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಗಳು ಮಾಡಿರುವುದು ಶ್ಲಾಘನೀಯವೆಂದರು.

ಕಾರ್ಯಕ್ರಮದಲ್ಲಿ ಸೂರಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜೀತೆಂದ್ರ ಶೆಟ್ಟಿ, ಸೂರಿಂಜೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಕೇಶ್ ಶೆಟ್ಟಿ ಬೈಲಗುತ್ತು, ಉದ್ಯಮಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು, ಅಭ್ಯುದಯ ಸೇವಾ ಟ್ರಸ್ಟನ ವಸಂತ ರಾವ್,  ಕೇಸರಿ ಬಳಗದ ನವೀನ್, ಸುರೇಶ್ ಶೆಟ್ಟಿ, ಶಿರಿಡಿ ಸಾಯಿ ಫ್ರೆಂಡ್ಸ್ ನ ಭೋಜರಾಜ್ ಶೆಟ್ಟಿ ಸೂರಿಂಜೆ, ಸುಧಾಕರ ಬಂಗೇರ, ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಇನ್ ಚಾರ್ಜ್ ಡಾ. ಅಶೋಕ್, ಮೆಡಿಕಲ್ ಸುಪೀರಿಯಡೆಂಟ್ ಡಾ.ಕಿರಣ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು