6:52 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು 

25/07/2021, 19:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ.

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಇಡೀ ಅಥಣಿ ತಾಲೂಕಿನ ಇಂಗಳಗಾಂವ ಹುಲಗಬಾಳ, ಖವಟಕೊಪ್ಪ, ಪಿ ಕೆ ನಾಗನೂರ ಸೇರಿದಂತೆ ಹಲವು ಗ್ರಾಮಗಳ ತೋಟದ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತದಿಂದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಎರಡು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದಿದ್ದಾರೆ.


ಕೃಷ್ಣಾ ನದಿ ತೀರದ ಜನರು ಕಾಳಜಿ ಕೇಂದ್ರಗಳಿಗೆ ಬರುವ ಮೂಲಕ ಜೀವರಕ್ಷಣೆಗೆ ಆದ್ಯತೆ ಕೊಡಬೇಕು. ಸಂತ್ರಸ್ತರಿಗೆ ಸರ್ಕಾರದ ಸಮರ್ಪಕ ಪರಿಹಾರ ಸಿಗುವ ಭರವಸೆ ಇದ್ದು, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಆದಷ್ಟು ಬೇಗ ಗ್ರಾಮಗಳಿಂದ ಹೊರಗೆ ಬಂದು ಸುರಕ್ಷಿತ ತಾಣ ಸೇರಬೇಕೆಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು