8:22 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್

04/09/2023, 23:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ.
3000 ಲಂಚ ಪಡೆಯುವಾಗ ಆರ್ ಟಿಒ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಟೆಂಡರ್ ಲತಾ ಹಾಗೂ ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.
ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆಯನ್ನು ಆರ್.ಟಿ.ಓ. ಅಧಿಕಾರಿ ಮಧುರಾ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಬೈಕ್ ಶಾಪ್ ಓನರ್ ಮನವಿ ಮಾಡಿದ್ದರು. 1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದರು.
ಫೈಲ್ ಪೆಂಡಿಂಗ್ ಇಟ್ಟಿದ್ದ ಆರ್ ಟಿಒ ಅಧಿಕಾರಿ ಬೈಕಿಗೆ 1000ದಂತೆ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಆರ್ ಟಿಒ ಮಧುರಾ
ಅಡೆಂಡರ್ ಮೂಲಕ ಡೀಲ್ ನಡೆಸುತ್ತಿದ್ದರು ಎನ್ನಲಾಗಿದೆ.
ಇದೀಗ ಹಣ ಪಡೆಯುವಾಗ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.
ಅಟೆಂಡರ್ ಲತಾ, ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು