1:52 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ

05/09/2023, 18:35

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವಲ್ಪ ಅಡ್ಡಿಯಾಯಿತು.


ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಪುರಭವನದ ಎರಡೂ ಬದಿಯ ಫುಟ್ ಪಾತ್ ನಲ್ಲಿ ಹೂವಿನ ವ್ಯಾಪಾರ ಮೇಳೈಸಿತು. ಆದರೆ ಇವತ್ತು ಬೆಳಗ್ಗಿನಿಂದ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸರಾಗ ವ್ಯಾಪಾರಕ್ಕೆ ತೊಡಕಾಯಿತು. ಪುರಭವನದ ಸುತ್ತಮುತ್ತ, ಅಂಡರ್ ಪಾಸ್ ನ ಲೇಡಿಗೋಶನ್ ಬದಿಯಲ್ಲಿ ಹೂವಿನ ವ್ಯಾಪಾರಿಗಳು ಸೇವಂತಿಗೆ, ಗೊಂಡೆ ಹೂವು, ಕಾಕಡ, ಕನಕಾಂಬರ ಇಟ್ಟು ಗ್ತಾಹಕರನ್ನು ಆಕರ್ಷಿಸುತ್ತಿದ್ದರು. ಅದೇ ರೀತಿ ಲಾಲ್ ಭಾಗ್ ನಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ಹೊರ ಜಿಲ್ಲೆಗಳಿಂದ ಬಂದ ವ್ಯಾಪಾರಿಗಳು ಭರ್ಜರಿ ವ್ಯಾಪಾರ ನಡೆಸುತ್ತಿದ್ದರು. ಮಂಗಳೂರು ಸೆಂಟ್ರಲ್ ಮಾರ್ಕೆಟ್, ಉರ್ವ ಮಾರ್ಕೆಟ್, ಅಳಕೆ, ಬಿಜೈ, ಕಾರ್ ಸ್ಟ್ರೀಟ್‌ ಮಾರುಕಟ್ಟೆಗಳಲ್ಲಿ ಕೂಡ ಹೂವಿನ ವ್ಯಾಪಾರ ಭರ್ಜರಿ ಯಾಗಿ ನಡೆಯಿತು. ಹೂವಿನ ದರ ಕೂಡ ಕೊಂಚ ಜಾಸ್ತಿಯೇ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು