7:18 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ಹಾಸ್ಟೆಲ್ ಮತ್ತು ವಸತಿ ಶಾಲೆ ಅವ್ಯವಸ್ಥೆ ಎಂದಿಗೂ ಸಹಿಸೊಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

06/09/2023, 21:36

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ 2013 ರಿಂದ 23 ರವರೆಗಿನ ಪ್ರಗತಿ ವರದಿ ಸಿದ್ದಪಡಿಸುವಂತೆ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದ್ದಾರೆ.


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಅಧಿಕಾರಿಗಳ ಬಳಿ ಸೂಕ್ತ ಮಾಹಿತಿ ಇಲ್ಲದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿ ಹತ್ತು ದಿನಗಳಲ್ಲಿ ವರದಿ ಸಿದ್ದಪಡಿಸಿಟ್ಟುಕೊಳ್ಳಿ ಮತ್ತೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ ಎಂದು ಹೇಳಿದರು.
ವಸತಿ ಇಲಾಖೆ ವ್ಯಾಪ್ತಿಯ ಕೊಳೆಗೇರಿ ಅಭಿವೃದ್ಧಿ ಮಂಡಳಿ, ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ, ಅಲ್ಪಸಂಖ್ಯಾತರ ಇಲಾಖೆಯ ಅಲ್ಫಾಸಂಖ್ಯಾತರ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನನಾಲಯ ವತಿಯಿಂದ ಕಳೆದ ಇಪ್ಪತ್ತು ವರ್ಷಗಳ ಸಮಗ್ರ ವರದಿ ತಯಾರಿಸಿ. ನನ್ನ ಬಳಿಯೂ ಮಾಹಿತಿ ಇದ್ದು ಯಾರಾದರೂ ತಪ್ಪು ಮಾಹಿತಿ ಕೊಟ್ಟರೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಖ್ಫ್ ಬೋರ್ಡ್ ವ್ಯಾಪ್ತಿಯ ಆಸ್ತಿ ಗಳು, ಒತ್ತುವರಿ, ನ್ಯಾಯಾಲಯದಲ್ಲಿ ಇರುವ ಪ್ರಕರಣ ಗಳ ಬಗ್ಗೆಯೂ ವರದಿ ಸಿದ್ದಪಡಿಸಿ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ಮೂಲ ಸೌಕರ್ಯ ಹಾಗೂ ಗುಣಮಟ್ಟದ ಆಹಾರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ನಾನು ದಿಢೀರ್ ಭೇಟಿ ನೀಡುತ್ತೇನೆ. ಲೋಪ ಕಂಡು ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಮಂಗಳವಾರ ವೆಲೆನ್ಸಿಯಾ ರಸ್ತೆಯಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಹಾಸ್ಟೆಲ್ ನ ಅವ್ಯವಸ್ಥೆ ಪ್ರಸ್ತಾಪಿಸಿದ ಸಚಿವರು, ನಿಮ್ಮ ಮನೆ ಮಕ್ಕಳ ಬಗ್ಗೆ ಅ ರೀತಿ ನಿರ್ಲಕ್ಷ್ಯ ವಹಿಸುತ್ತಿರಾ, ಸರ್ಕಾರಿ ವೇತನ ಪಡೆದು ಅದಕ್ಕೆ ತಕ್ಕಂತೆ ಕೆಲಸ ಮಾಡಿ. ಹಾಸ್ಟೆಲ್ ಮತ್ತು ವಸತಿ ಶಾಲೆ ಅವ್ಯವಸ್ಥೆ ನಾನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದರು.
ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು