7:17 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು: ಮಂಗಳೂರಿನಲ್ಲಿ ಸಚಿವ ಬಿ.ಜಮೀರ್ ಅಹ್ಮದ್ ಭರವಸೆ

07/09/2023, 11:35

ಮಂಗಳೂರು(reporterkarnataka.com): ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್ ಹೇಳಿದರು.
ಬುಧವಾರ ಮಂಗಳೂರು ಪ್ರೆಸ್ ಕ್ಲಬ್‌ಗೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದ ಅವರು ‘ ಪತ್ರಕರ್ತರ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಿದೆ ಎಂದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
ಎಂಎಲ್‌ಸಿ ಹರೀಶ್ ಕುಮಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಅನ್ನು ಮಂಗಳೂರು, ರಾಜ್ಯ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಹಾಗೂ ಅವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಅವರನ್ನು ಗೌರವಿಸಲಾಯಿತು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಅರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು