5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳಾ ಕ್ರೀಡಾಂಗಣ ವಾಕಿಂಗ್ ಟ್ರ್ಯಾಕ್ ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯ: ಶಾಸಕ ವೇದವ್ಯಾಸ ಕಾಮತ್

09/09/2023, 23:30

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗಿತ್ತು. ಇದೀಗ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.


ವಾಕಿಂಗ್ ಟ್ರ್ಯಾಕ್‍ಗೆ ಸರಕಾರದಿಂದ ಒಂದೂವರೆ ಕೋಟಿ ರೂ. ಬಿಡುಗಡೆ ಆಗಿ ಕಾಮಗಾರಿ ಆರಂಭವಾಗಿತ್ತು. ಆದರೆ ಈಗ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿಗಳು ಬಿದ್ದಿದ್ದು, ವಾಕಿಂಗ್ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಥ್ಲೆಟಿಕ್ ಅಸೋಸಿಯೇಶನ್ ಪ್ರಮುಖರು ಕೂಡಾ ಗಮನಕ್ಕೆ ತಂದಿದ್ದರು. ಮುಂದಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ, ಕಾರ್ಪೊರೇಶನ್ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್, ಸಾರ್ವಜನಿಕರ ಪರವಾಗಿ ಪುರುಷೋತ್ತಮ ಪೂಜಾರಿ ದಕ್ಷಿಣ ಕನ್ನಡ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರು, ದೇವಿದಯಾಳ್ ಕನ್‍ಸ್ಟ್ರಕ್ಷನ್ ಮಾಲೀಕ ಜಗದೀಶ್ ಶೆಟ್ಟಿ ಸೇರಿದಂತೆ ಅನೇಕ ಸಾರ್ವಜನಿಕರು ಈ ಕಾಮಗಾರಿ ಪೂರ್ಣಗೊಳಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅವರೆಲ್ಲರ ಮನವಿ ಪ್ರಕಾರ ಅತೀ ಶೀಘ್ರದಲ್ಲಿ ಉಳಿಕೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮುಂದುವರಿಸಲು ಚಿಂತನೆ ನಡೆಸಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡಲ್ಲಿ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸದಾನಂದ ಆಳ್ವ, ಅನಿಲ್ ಆಳ್ವ, ಸ್ಟೀವನ್, ಪ್ರೇಮನಾಥ ಶೆಟ್ಟಿ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ರವಿರಾಜ್ ನ್ಯಾಷನಲ್ ಲೆವೆಲ್ ಅಥ್ಲೆಟಿಕ್, ಸುದರ್ಶನ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ಮೊಹಮ್ಮದ್ ಮಾಸ್ತರ್ ಅಥ್ಲೆಟಿಕ್, ಕರುಣಾಕರ ರೈ,ತಾರಾನಾಥ ಶೆಟ್ಟಿ, ರೇಖಾ ಶೆಟ್ಟಿ, ಹರಿದಾಸ್ ಕೂಳೂರು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಮಂಗಳೂರು ವಿಶ್ವವಿದ್ಯಾನಿಲಯ, ಯಶವಂತ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ಪುಷ್ಪರಾಜ್ ಹೆಗಡೆ, ಇಂಟರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಎನ್ ಐಎಸ್ ಕೋಚ್, ರವಿ ನಾಯ್ಕ, ಡೈರೆಕ್ಟರ್ ಯುತ್ ಸರ್ವಿಸ್ ಸ್ಪೋರ್ಟ್ಸ್, ಮಂಜುನಾಥ್, ಸೂಪರ್ವೈಸರ್, ನಂದಕುಮಾರ್, ಸತೀಶ್ ಎ.ಕೆ, ಸುಧಾಕರ್, ವಸಂತ್, ದೇವರಾಜ, ತರುಣ್, ಧೀರಜ್, ನಂದಾ ಶೆಣೈ, ಅಜಿತ್ ರಾವ್, ವೆಂಕಟೇಶ್ ಆಚಾರ್, ಮೋಹನ್ ಆಚಾರ್, ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್, ಪವನ್ ಶೆಣೈ, ಆನಂದ ರೈ, ವಸಂತ್ ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು