8:49 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

10/09/2023, 14:49

ಬೆಂಗಳೂರು(reporterkarnataka.com): ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ದಾಳಿ ವೇಳೆ ಕೆಲವು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ತಾವು ಎಂಎಲ್‌ಎ ಸಂಬಂಧಿಕರು ಎಂದು ಹೇಳಿಕೊಂಡು ವಾಗ್ವಾದ ನಡೆಸಿದ ಘಟನೆ ಕೂಡ ನಡೆದಿದೆ.
ಶುಕ್ರವಾರ ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಜಡಿಯಲಾಗಿದೆ.
ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡು ಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು