10:40 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ

10/09/2023, 21:37

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್ನು ನಿಯೋಜಿಸಲು ಸರಕಾರ ನಿರ್ಧರಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದು, ಈಗಾಗಲೇ ಬಂದ್​ಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ನಡೆದಿದೆ.
ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲು ಕರೆ ನೀಡಲಾಗಿದೆ.
ಬಂದ್ ಸಂದರ್ಭದಲ್ಲಿ ಆಟೋ, ಟ್ಯಾಕ್ಸಿ ಸಿಗದೇ ಜನ ಸಾಮಾನ್ಯರು ಕಷ್ಟ ಪಡಬಾರದು ಎಂದು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬಂದ್ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳನ್ನು ರಸ್ತೆಗಿಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬಸ್ ಕಾರ್ಯ ನಿರ್ವಹಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಬಿಎಂಟಿಸಿ ಎಂಡಿ, ಕೆಎಸ್‌ಆರ್​​​ಟಿಸಿ ಎಂಡಿ, ಸಾರಿಗೆ ಇಲಾಖೆಯ ಕಮಿಷನರ್ ಹಾಗೂ ‌ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು