10:35 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ತಿರುವೈಲು ದ.ಕ. ಜಿಪಂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ನೂತನ ತರಗತಿ ಕೊಠಡಿ ಉದ್ಘಾಟನೆ

11/09/2023, 12:48

ಗುರುಪುರ(reporterkarnataka.com): ಕಳೆದ 6 ವರ್ಷಗಳ ಅವಧಿಯಲ್ಲಿ ಶಾಸಕನಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ತಿರುವೈಲು ಶಾಲೆಗೆ ಸರ್ಕಾರದ `ವಿವೇಕ’ ಯೋಜನೆಯಡಿ ಎರಡು ತರಗತಿ ಕೊಠಡಿ ಒದಗಿಸಿ ಕೊಟ್ಟಿದ್ದೇನೆ. ಇಲ್ಲಿ ವಿದ್ಯಾರ್ಥಿಗಳ ಕೊರತೆ ಇಲ್ಲ. ಶಾಲೆಯು ಹೈಸ್ಕೂಲ್ ಆಗಿ ಮಾರ್ಪಾಡಾಗಬೇಕು ಎನ್ನುವ ಸ್ಥಳೀಯರ ಬೇಡಿಕೆ ಪೂರೈಸಲು ಪ್ರಯತ್ನಿಸುತ್ತೇನೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.


ವಾಮಂಜೂರು ಮನಪಾ ತಿರುವೈಲು 20ನೇ ವಾರ್ಡ್ನ ದ.ಕ.ಜಿ.ಪಂ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಮೂರು ನೂತನ ತರಗತಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿದ ಹೇಮಲತಾ ಸಾಲ್ಯಾನ್ ಮತ್ತು ಅವರ ಪತಿ, ಉದ್ಯಮಿ ರಘು ಸಾಲ್ಯಾನ್ ಅವರನ್ನು ಶಾಲೆಯ ಪರವಾಗಿ ಶಾಸಕರು ಶಾಲು ಹೊದಿಸಿ, ಹೂಗುಚ್ಛ ನೀಡಿ ಸನ್ಮಾನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು