4:06 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ

11/09/2023, 16:07

ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಸುರೇಶ್ ಎಂ, ಭದ್ರಾವತಿ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷ ನಾಗರಾಜ್, ಸಾಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, , ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಶಿವಾನಂದ್ ಮದರಖಂಡಿ, ಮತ್ತು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂಧಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿವೆ. ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿವಭಾಗದಲ್ಲಿ 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಕೋಮು ಸೌಹಾರ್ದತೆಗೆ ದಕ್ಕೆತರುವಂತಹ / ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು