11:11 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಣ!: ಕಾರಣ ಏನು ಗೊತ್ತೇ?

11/09/2023, 20:00

ಬೆಂಗಳೂರು(reporterkarnataka.com): ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಇಂದು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸಿ ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದರು.

ಅನಿಲ್ ಕುಂಬ್ಳೆ ಅವರು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದರು. ಇದಕ್ಕೆ ಕಾರಣವೂ ಇದೆ. ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು.
ಟ್ಯಾಕ್ಸಿ ಇಲ್ಲದ ಕಾರಣ ಕುಂಬ್ಳೆ ಅವರು ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದರು. ಈ ಕುರಿತು ಅನಿಲ್ ಕುಂಬ್ಳೆ ಅವರು ಫೋಟೋವೊಂದನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಎಂದು ಅವರು ಒಕ್ಕಣೆ ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು