ಇತ್ತೀಚಿನ ಸುದ್ದಿ
ಉಡುಪಿ: ಕಾಂಗ್ರೆಸ್ ಬೆಂಬಲಿತ ಗ್ರಾಪಂ ಅಧ್ಯಕ್ಷ, ಉಪಾಧ್ಯಕರಿಗೆ ಅಭಿನಂದನಾ ಕಾರ್ಯಕ್ರಮ
12/09/2023, 20:25

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಪಿಆರ್ ಎಸ್ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆಯ್ಕೆ ಆಗಿರುವ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಮಾಜಿ ಉಪಾಧ್ಯಕ್ಷರು ಅಧ್ಯಕ್ಷರುಗಳಿಗೆ ಅವರಿಗೆ ಪಕ್ಷದ ವತಿಯಿಂದ ಅಭಿನಂದನ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಮಾತನಾಡಿ, ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ತಮ್ಮ ಅಧಿಕಾರವನ್ನು ಉಪಯೋಗಿಸಿ ತಮ್ಮ ಕ್ಷೇತ್ರದ ಅಭಿವೃದ್ಧಿ ನಡೆಸಬೇಕೆಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಇಂತಹ ಇನ್ನು ಹಲವಾರು ಕಾರ್ಯಕ್ರಮಗಳು ನಡೆಯುವುದು ಎಲ್ಲದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷವನ್ನು ಬಲಪಡಿಸಿ. ಮುಂದಿನ ತಿಂಗಳ ಅಕ್ಟೋಬರ್ 3 ನೇ ತಾರೀಕಿನಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿಗೆ ಮತ್ತು ಅಕ್ಟೋಬರ್ 4 ರಂದು ಉಡುಪಿ ಜಿಲ್ಲೆಯಲ್ಲಿ ಪಂಚಾಯತ್ ರಾಜ್ ಬಗ್ಗೆ ಬೃಹತ್ ಸಭೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದರು.