11:10 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್

26/07/2021, 19:18

ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,

ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. 

ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥವಾಗಿದೆ ಎಂದರು. ಕದ್ರಿಯ ಯೋಧ ಸ್ಮಾರಕದ ಅಭಿವೃದ್ಧಿಗೆ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು. ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ,ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ  ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು