8:28 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತಕ್ಕೆ ಬೆಳಗಾವಿ ಮೂಲದ 5 ಮಂದಿ ಸ್ಥಳದಲ್ಲೇ ಸಾವು; 7 ಮಂದಿ ಗಂಭೀರ

17/09/2023, 22:45

ಕಡಪ(reporterkarnataka.com): ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಆಂದ್ರಪ್ರದೇಶದ ಅಣ್ಣಮಯ ಜಿಲ್ಲೆಯಲ್ಲಿ ನಡೆದಿದೆ.
ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ಬೆಳಗಾವಿ ಮೂಲದ 16 ಭಕ್ತರು ಕ್ರೂಸರ್ ವಾಹನದಲ್ಲಿ ಕಡಪದಿಂದ ಚಿತ್ತೂರಿಗೆ ಪ್ರಯಾಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ.
ಅಪಘಾತದಲ್ಲಿ ಗಾಯಗೊಂಡವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ಪೊಲೀಸ್ ಅಧಿಕಾರಿ ನಾಗಬಾಬು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು