7:53 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು