3:15 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾವೇರಿ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ

21/09/2023, 19:44

ಹೊಸದಿಲ್ಲಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆ ಕುರಿತು ವಿವಾದ ಮತ್ತೆ ಗರಿಗೆದರಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯದ ಮನವಿಯನ್ನು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಆದರೆ ಕರ್ನಾಟಕದ ಅರ್ಜಿಯನ್ನು ಸುಪ್ರೀಂಕೋರ್ಟ್
ತಿರಸ್ಕರಿಸಿದೆ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಕೂಡ ಪೀಠ ನಿರಾಕರಿಸಿದೆ. ಇದಲ್ಲದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದೂ ಸೂಚಿಸಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು