6:43 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ

21/09/2023, 19:46

ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು.
ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಯುವ ಪ್ರತಿನಿಧಿಗಳು ಭಾಗವಹಿಸಿ ನಾಡಿನ ಜನಸಾಮಾನ್ಯರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ನಿಟ್ಟಿನಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಅನ್ಯಾಯಗಳ ವಿರುದ್ಧ ಹೋರಾಡುವ, ಶಿಕ್ಷಣದಿಂದ ವಂಚಿತ ಹಾಗೂ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಸಮಸ್ಯೆಗಳಿಗೆ ಮಾರ್ಗೋಪಾಯವನ್ನು ಕಂಡುಕೊಳ್ಳುವ ಮತ್ತವುಗಳ ವಿರುದ್ಧ ರಾಜಿರಹಿತ ಹೋರಾಟಗಳನ್ನು ಸಂಘಟಿಸುವ ಕುರಿತು ಚರ್ಚಿಸಲು ಡಿವೈಎಫ್ಐ ದ.ಕ. ಜಿಲ್ಲಾ ಸಮ್ಮೇಳನವು ನಡೆಯಲಿರುವುದು.
ಇಂದು ಡಿವೈಎಫ್ಐ ಕಚೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ 14 ನೇ ದ.ಕ ಜಿಲ್ಲಾ ಸಮ್ಮೇಳನದ ಲೋಗೋವನ್ನು ಅನಾವರಣಗೊಳಿಸಲಾಯಿತು. ಈ ವೇಳೆ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಂಮಜೂರು, ಪದಾಧಿಕಾರಿಗಳಾದ ರಫೀಕ್ ಹರೇಕಳ, ನವೀನ್ ಕೊಂಚಾಡಿ, ನಿತಿನ್ ಕುತ್ತಾರ್ , ಆಶಾ ಬೋಳೂರು, ಸುನಿಲ್ ತೇವುಲ, ತಯ್ಯೂಬ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ಚರಣ್ ಶೆಟ್ಟಿ,‌ ರಿಯಾಝ್ ಮೂಡಬಿದ್ರೆ, ರಿಜ್ವಾನ್ ಹರೇಕಳ ಮುಂತಾದವರು ಉಪಸ್ಥಿತರಿದರು.

ಇತ್ತೀಚಿನ ಸುದ್ದಿ

ಜಾಹೀರಾತು