7:06 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ: ಸೈನಿಕ‌ ಕಲ್ಯಾಣ ನಿಧಿ ವಿತರಣೆ, ಸೇನಾಯೋಧರಿಗೆ ಸನ್ಮಾನ

27/07/2021, 14:31

ಸುರತ್ಕಲ್(reporterkarnataka news): ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಆಶ್ರಯದಲ್ಲಿ ಎಂಟನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಜರುಗಿತು. 

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಇಡ್ಯಾ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಐ. ರಮಾನಂದ ಭಟ್ ಅವರು ಭಾರತದಲ್ಲಿ ನೆಮ್ಮದಿಯಿಂದ ಬದುಕಲು ವೀರಯೋಧರ ಸ್ಮರಣೆ ಅಗತ್ಯ. ರಾಷ್ಟ್ರಕ್ಕಾಗಿ ವೀರಯೋಧರು ಪ್ರಾಣತೆತ್ತಿದ್ದಾರೆ. ಯೋಧರ ಶ್ರಮದಿಂದ ನಮಗೆ ನೆಮ್ಮದಿಯ ವಾತಾವರಣವನ್ನು ಅವರು ಕರುಣಿಸಿದ್ದಾರೆ. ವೀರಯೋಧರ ತ್ಯಾಗ ಮರೆಯಲು ಸಾಧ್ಯವಿಲ್ಲ‌. ಅವರ ತ್ಯಾಗ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಆಪರೇಷನ್ ವಿಜಯ್ ಮತ್ತು ಆಪರೇಷನ್ ವಿಜಯ್ ಸ್ಟಾರ್ ನಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿ ಕಾರ್ಗಿಲ್ ವಾರ್ ಮೆಡಲ್ ಪುರಸ್ಕೃತರಾದ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ ಕಾರ್ಗಿಲ್ ಯುದ್ಧದಲ್ಲಿ ತಾವು ಭಾಗವಹಿಸಿದ್ದ ನೆನಪನ್ನು ಬಿಚ್ಚಿಟ್ಟರು‌. ಈ ಸಂದರ್ಭದಲ್ಲಿ

14  ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆಯನ್ನು ಮಾಡಲಾಯಿತು. ಭೂಸೇನಾ ಯೋಧ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ, ಕಿಶನ್ ಕುಮಾರ್ ರಾವ್, ಸಿಪಿಓ ವಿಜಯನ್ ಕೆ., ವಾಯುಸೇನಾ ಯೋಧ ಅರವಿಂದ್ ಭಟ್ ಅವರುಗಳನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಓ ಎಂ ಪಿ ಎಲ್ ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಸ್.ಎಸ್. ನಾಯಕ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಗೌರವಧ್ಯಕ್ಷ 

ಮಹಾಬಲ ಪೂಜಾರಿ ಕಡಂಬೋಡಿ, ಸಾರ್ಜೆ೦ಟ್ ಶ್ರೀಕಾಂತ್ ಶೆಟ್ಟಿ ಬಾಳ, ರಜನಿ ದುಗ್ಗಣ್ಣ, ಲೋಕೇಶ್ ಕೋಡಿಕೆರೆ ಮತ್ತಿತರು ಉಪಸ್ಥಿತರಿದ್ದರು. ರಾಷ್ಟ್ರಭಕ್ತ ನಾಗರಿಕ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು‌. ಉಪಾಧ್ಯಕ್ಷ ಯಶಪಾಲ್ ಸಾಲಿಯಾನ್ ಸ್ವಾಗತಿಸಿದರು.

ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸೈನಿಕ ಕಲ್ಯಾಣ ನಿಧಿ ವರದಿ ವಾಚಿಸಿದರು‌. ಸಾಯಿಪೃಥ್ವಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು