7:42 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 1 ಲಕ್ಷ ಮೌಲ್ಯದ ಎಂಡಿಎಂಎ ವಶ

23/09/2023, 12:58

ಮಂಗಳೂರು(reporterterkarnataka.com): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿದ್ದಾರೆ.
ನಗರದ ಹೊರವಲಯದ ಉಳ್ಳಾಲಬೈಲ್ ಪರಿಸರದಲ್ಲಿ ವ್ಯಕ್ತಿಗಳಿಬ್ಬರು ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ಎಂಬ ನಿಷೇಧಿತ ಮಾದಕ ವಸ್ತುವನ್ನು ಹೊಂದಿದ್ದ ಉಳ್ಳಾಲದ ನಿವಾಸಿ ಜಾಕೀರ್(29) ಹಾಗೂ
ವಳಚ್ಚಿಲ್ ಪದವು ಮನೆ ನಿವಾಸಿ ಕಾರ್ತಿಕ್ ಸುವರ್ಣ(27) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 20 ಗ್ರಾಂ ತೂಕದ 1 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್ ಗಳು-2, ನಗದು 3300 ರೂ. ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.15 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು