ಇತ್ತೀಚಿನ ಸುದ್ದಿ
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ರಸ್ತೆಯಲ್ಲೇ ಧಗಧಗನೆ ಉರಿದ ವಾಹನ; ಮೂವರು ಪಾರು
23/09/2023, 19:51
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯದಲ್ಲೇ ಧಗ ಧಗನೆ ಹೊತ್ತಿ ಉರಿದ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಂಡು ಕಾರಿನಿಂದ ಇಳಿದು ಮೂವರು ಪ್ರಯಾಣಿಕರು ಪಾರಾಗಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರು
ಹರಸಾಹಸ ಪಟ್ಟರು. ಬೆಂಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.