10:48 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಯುನಿಸೆಕ್ಸ್‌ ಸೆಲೂನ್‌ಗಳಿಗೆ ಪೊಲೀಸ್ ಕಮಿಷನರ್ ದಿಢೀರ್ ಭೇಟಿ: ಕಾನೂನುಬಾಹಿರ ಚಟುವಟಿಕೆ ನಡೆಸಿದರೆ ಕಠಿನ ಕ್ರಮದ ಎಚ್ಚರಿಕೆ

24/09/2023, 12:40

ಮಂಗಳೂರು(reporterkarnataka.com): ಯುನಿಸೆಕ್ಸ್‌ ಸೆಲೂನ್‌ಗಳಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಲವು ಯುನಿಸೆಕ್ಸ್‌ ಸೆಲೂನ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಕಮಿಷನರ್ ಅನುಪಮ್‌ ಅಗರ್‌ವಾಲ್‌ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ಡಜನಿಗೂ ಅಧಿಕ ಯುನಿಸೆಕ್ಸ್‌ ಸೆಲೂನ್‌ಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಸೆಲೂನ್‌ ಮಾಲಕರು ತಮ್ಮ ಕೆಲಸಗಾರರ ಬಗ್ಗೆ ಪೊಲೀಸ್‌ ದೃಢೀಕರಣ ಪಡೆಯಬೇಕು. ಎಲ್ಲ ಗ್ರಾಹಕರ ಮಾಹಿತಿ ದಾಖಲಿಸಿಕೊಳ್ಳಬೇಕು. ಇಲ್ಲವಾದರಲ್ಲಿ ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು