3:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರು ಜನತಾ ದರ್ಶನದಲ್ಲಿ‌ 366 ಅರ್ಜಿ ಸ್ವೀಕಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

25/09/2023, 21:46

ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ‌ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.
ಜನತಾ ದರ್ಶನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು, ಆ ಅರ್ಜಿಗಳಿಗೆ ಸಕಾಲಕ್ಕೆ ಪರಿಹಾರ ನೀಡುವ ಮೂಲಕ ಜನರಿಗೆ ಸ್ಪಂದಿಸಬೇಕು. ಆದಾಗ ಮಾತ್ರ ಅವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದೆ‌ಎನ್ನುವ ಭಾವನೆ ಬರುತ್ತದೆ, ಅದಕ್ಕೆ ಪ್ರಮಾಣಿಕ ಯತ್ನ ಮಾಡುವಂತೆ ಅವರು ಕಿವಿಮಾತು ಹೇಳಿದರು.
ಸ್ವೀಕರಿಸಲಾದ ಎಲ್ಲಾ 366 ಅರ್ಜಿಗಳಿಗೆ ಯಾವ ಕ್ರಮವಹಿಸಬೇಕೆಂಬುದನ್ನು ಅರ್ಜಿ ಮೇಲೆ ನಮೂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಜನತಾ ದರ್ಶನ‌ ಮಾಡಲಾಗುವುದು, ಇದರ‌ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಕೊಡುವುದು ಹಾಗೂ ಅವರ ಕಾನೂನು ಬದ್ದ ಬೇಡಿಕೆಯನ್ನು
ಈಡೇರಿಸುವುದಾಗಿದೆ, ಇಲ್ಲಿ ವಿಳಂಬ ಆಗಬಾರದು, ಜನರ ಕೆಲಸ ಕಾರ್ಯಗಳಿಗೆ ಅವರನ್ನು ವೃಥಾ ಓಡಾಡಿಸಬಾರದು,‌ ಜನರಿಗೆ ಕಿರುಕುಳ, ತೊಂದರೆ‌ ಆಗದಂತೆ ಕ್ರಮವಹಿಸಬೇಕು ಎಂದರು.
ಮುಖ್ಯಮಂತ್ರಿಗಳು ಈ ಜನ ಸ್ಪಂದನ ಕಾರ್ಯಕ್ರಮವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ತೆಗೆದುಕೊಂಡಿದ್ದು, ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಯತ್ನಿಸಿದ್ದಾರೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ,‌ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ‌ ಇಲಾಖೆಗಳ ಅಧಿಕಾರಿಗಳುನುತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪುತ್ತೂರು ಅಶೋಕ್ ಕುಮಾರ್‌ ರೈ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್,‌ ಜಿಪಂ ಸಿಇಒ ಡಾ. ಆನಂದ್,‌‌ ನಗರ‌ ಪೊಲೀಸ್ ಆಯುಕ್ತ ಅನುಪಮ್‌ ಅರ್ಗವಾಲ್, ಎಸ್ಪಿ ರಿಷ್ಯಂತ್ ಸಿ.ಬಿ., ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನೂರಾರು ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು