3:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

29 ಕೋಟಿ ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

27/09/2023, 20:45

ಉಡುಪಿ (reporterkarnataka.com) : ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿ ನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದ್ದು, ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ 2015 ರಲ್ಲಿ ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯವು ಪ್ರಾರಂಭವಾಗಿದ್ದು, ಇದಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇತ್ತು. ಈಗ ಕಟ್ಟಡ ನಿರ್ಮಾಣಕ್ಕೆ ಇದ್ದಂತಹ ಸ್ಥಳಾವಕಾಶ ಹಾಗೂ ಇತರೆ ಅಡೆತಡೆಗಳು ನಿವಾರಣೆಗೊಂಡಿದ್ದು, ಕಟ್ಟಡದ ನಿರ್ಮಾಣ ಕಾರ್ಯಗಳು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ನಾಳೆ ಮೈಸೂರಿನಲ್ಲಿ ನಡೆಯುವ ರೋಜ್‌ಗಾರ್ ಮೇಳದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ನೇಮಿಸಲು ಕ್ರಮವಹಿಸಲಾಗುವುದು ಎಂದರು.
ಇಲ್ಲಿ ನಿರ್ಮಾಣವಾಗುವ ಕೇಂದ್ರೀಯ ವಿದ್ಯಾಲಯವು ಸುಸಜ್ಜಿತ ಕಟ್ಟಡ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ಉದ್ಘಾಟನೆಗೊಳ್ಳಲಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಅದನ್ನು ಬಗೆಹರಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದ ಅವರು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯುವಂತೆ ಶುಭ ಹಾರೈಸಿದರು.
ಶಾಸಕ ಗುರ್ಮೆ ಸುರೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್, ಕೇಂದ್ರೀಯ ವಿದ್ಯಾಲಯದ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿಯ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಉಡುಪಿಯ ಬಿ.ಇ.ಓ ಡಾ. ಅಶೋಕ್ ಕಾಮತ್ ಮತ್ತು ಶಿಕ್ಷಕಿ ಮಾರ್ಗರೇಟ್ ಅಬ್ರಾಹಂ ನಿರೂಪಿಸಿದರೆ, ಪ್ರಾಂಶುಪಾಲ ನಾರಾಯಣ ರಾವ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು