10:02 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಮೂಡಿಗೆರೆ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು; 10ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

28/09/2023, 23:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹೆಜ್ಜೇನು ದಾಳಿಗೆ ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. 10 ಜನರ ಮೇಲೆ ದಾಳಿ ನಡೆಸಿದೆ. ಇವರಲ್ಲಿ
ವಿನೋದ, ಪುಷ್ಪ ಹಾಗೂ ಪ್ರೇಮಾ ಎಂಬುವವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಯುವಕರು, ಯುವತಿಯರು ಸೇರಿದಂತೆ ಗ್ರಾಮದ ಹಲವರು ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಉದಾಹರಣೆ ಸಾಕಷ್ಟು ನಡೆದಿವೆ. ಜೇನು ಹುಳುಗಳ ಹಠಾತ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು