9:54 PM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ; ಆರೋಪಿಗಳಿಂದ ಮಾರಕಾಯುಧ ವಶ

29/09/2023, 13:42

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿಕೊಂಡು ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಕುಖ್ಯಾತ ಆರೋಪಿಗಳಾದ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ ಅಲಿಯಾಸ್ ಗರುಡ ತಸ್ಲೀಮ್(34) ಹಾಗೂ ಹೈದರಾಲಿ ಅಲಿಯಾಸ್ ಹೈದು(26) ಬಂಧಿತ ಆರೋಪಿಗಳು. ಆರೋಪಿಗಳಿಂದ
2 ತಲವಾರುಗಳು, 1 ಚೂರಿ, 2 ಮೊಬೈಲ್ ಫೋನ್ ಮಹೇಂದ್ರ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 5.21 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ: ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆಯಾಗಿರುತ್ತದೆ. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಈ ವಿಚಾರವು ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಈ ವಿಚಾರದಲ್ಲಿ ಎರಡು ತಂಡಗಳ ನಡುವೆ ಆಗಾಗ್ಗೆ ಸಣ್ಣ ಸಣ್ಣ ಮಾತುಕತೆಗಳಾಗಿದ್ದು, ಈ ದಿನ ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ಮಾರಕಾಯುಧಗಳಾದ ತಲವಾರುಗಳೊಂದಿಗೆ ಹೊಂಚು ಹಾಕುತ್ತಿದ್ದ ಮಾಹಿತಿಯನ್ನು ಪಡೆದು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ತಸ್ಲೀಮ್ ಅಲಿಯಾಸ್ ಗರುಡ ತಸ್ಲೀಮ್ ಎಂಬಾತನು ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ಸುಮಾರು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು. ಇನ್ನೋರ್ವ ಆರೋಪಿ ಹೈದರಾಲಿ ಅಲಿಯಾಸ್ ಹೈದು ಎಂಬಾತನು ಈ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.


ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು