3:02 AM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ: ಬಣಕಲ್ ನಜರೆತ್ ಶಾಲೆಗೆ ಕಂಚಿನ ಪದಕ

29/09/2023, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಎಚ್. ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ.

14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿ ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. ಉತ್ತಮ ತಂಡವನ್ನು ಸಜ್ಜುಗೊಳಿಸಿದ್ದರು. ನಜರೆತ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ್ ಗೌಡ ಡಿ. ಆರ್. ಮತ್ತು ವಿಧಾತ್ ಟಿ. ಗೌಡ ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಪ್ರಾಂಶುಪಾಲೆ ಹಿಲ್ಡಾ ಲೋಬೋ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು