6:19 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸ್ಪ್ರೆ

30/09/2023, 11:58

ಬೆಳಗಾವಿ(reporterkarnataka.com): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.


ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ 30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.
ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ.
ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ.
ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ ಐದು ನಿಮಿಷಗಳಲ್ಲಿ ಮಳೆ ಬರಬಹುದು.
ಒಂದು ವೇಳೆ ಮೋಡಗಳು ಇರದಿದ್ದಲ್ಲಿ ಹಾಗೇ ಹಿಂದಿರುಗಲಾಗುತ್ತದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದರು.
ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ ಎಂದು ಹೇಳಿದರು.
5 ರಿಂದ 10 ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು