5:34 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ ಸಾವು; ಸ್ಥಳೀಯರ ಆಕ್ರೋಶ

30/09/2023, 13:02

ಕುಂದಾಪುರ(reporterkarnataka.com): ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ಕಾಲುದಾರಿಯಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ತಗುಲಿ
ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ತೆರಳಿದ್ದ ಗಂಡ ಮಹಾಬಲ ದೇವಾಡಿಗ ಅವರನ್ನು ಹುಡುಕಲು ತೆರಳಿದ್ದ ಪತ್ನಿ ಲಕ್ಷ್ಮೀ ದೇವಾಡಿಗ ಅವರು ತನ್ನ ಗಂಡ ವಿದ್ಯುತ್ ಶಾಕ್ ಗೆ ಒಳಗಾಗಿರುವುದನ್ನು ಕಂಡು ಪತಿಯನ್ನು ರಕ್ಷಿಸಲು ಯತ್ನಿಸಿದಾಗ ತಾನು ಕೂಡ ವಿದ್ಯುತ್ ಪ್ರವಾಹಕ್ಕೆ ಗುರಿಯಾಗಿ ಸಾವನ್ನಪ್ಪಿದ್ದಾರೆ.
ಮೃತ ಮಹಾಬಲ ದೇವಾಡಿಗ ಅವರು ಮನೆಯೊಂದರಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಮಳೆಯ ಅಬ್ಬರದ ನಡುವೆ ಕೆಲಸಕ್ಕೆ ತೆರಳಿದ್ದರು. ಪತಿ ಸಂಜೆಯಾದರೂ ಮನೆಗೆ ಬಾರದೇ ಇರುವುದನ್ನು ಕಂಡು ಪತ್ನಿ ಲಕ್ಷ್ಮೀ ಹುಡುಕಾಟಕ್ಕೆ ತೆರಳಿದ್ದಾರೆ. ಈ ವೇಳೆ ಕಾಲುದಾರಿಯಲ್ಲಿ ತುಂಡರಿಸಿದ ವಿದ್ಯುತ್ ತಂತಿ ತಗುಲಿ ಪತಿ ಬಿದ್ದಿರುವುದನ್ನು ಲಕ್ಷ್ಮೀ ಗಮನಿಸಿದ್ದಾರೆ. ತಕ್ಷಣವೇ ಪತಿಯನ್ನು ರಕ್ಷಿಸಲು ಸ್ಥಳೀಯರಲ್ಲಿ ನೆರವಿಗೆ ಬರುವಂತೆ ಕೂಗಿದ್ದಾರೆ. ಆದರೆ ಸ್ಥಳೀಯರು ಬರುವಷ್ಟರಲ್ಲೇ ಮಳೆ ನೀರಿನಿಂದ ಒದ್ದೆಯಾದ ಮರದ ತುಂಡಲ್ಲಿ ಪತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಲಕ್ಷ್ಮೀ ಪತಿಯ ಸಮೀಪವೇ ಪ್ರಾಣಬಿಟ್ಟಿದ್ದಾರೆ. ಮೃತ ದಂಪತಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಇಂತಹ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಬಲ ದೇವಾಡಿಗ ಅವರು ಸಾವನ್ನಪ್ಪಿದ ಕಾಲು ದಾರಿಯ ಮಧ್ಯೆ ಎರಡು ವಿದ್ಯುತ್ ತಂತಿ ಹಾದು ಹೋಗಿದೆ. ಅನೇಕ ಕಡೆಗಳಲ್ಲಿ ತುಂಡಾದ ತಂತಿಗಳನ್ನು ಮತ್ತೆ ಜೋಡಿಸಲಾಗಿದೆ. ಎರಡು ತಂತಿಯಲ್ಲಿ ಒಂದು ತಂತಿ ತುಂಡಾಗಿ ಬಿದ್ದಿದ್ದು, ಇದೇ ತಂತಿ ತಗುಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಜಯರಾಮ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು