8:28 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!!

28/07/2021, 08:12

ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ
ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

ಗೃಹ ಸಚಿವರಾಗಿದ್ದ ಬೊಮ್ಮಾಯಿ ಅವರು ಜುಲೈ 18ರಂದು ಶ್ರೀ ಕ್ಷೇತ್ರ ಮೈಲಾರಕ್ಕೆ ಭೇಟಿ ನೀಡಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ವಂಶಪಾರಂಪರ್ಯ ಧರ್ಮಾಧಿಕಾರಿಗಳು ಕಪಿಲಮುನಿ ಪೀಠದ ಪೀಠಾಧ್ಯಕ್ಷರು ಆದ
 ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾಸ್ವಾಮಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ನೀವು ಮುಂದಿನ ಮುಖ್ಯಮಂತ್ರಿ ಆಗುವಿರಿ ಎಂದು ಬೊಮ್ಮಾಯಿ ಅವರ ತಲೆ ಮೇಲೆ ಕೈಇಟ್ಟು ಆಶೀರ್ವಾದ ಮಾಡಿದ್ದರು. ಇದೀಗ ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು