2:32 AM Saturday30 - August 2025
ಬ್ರೇಕಿಂಗ್ ನ್ಯೂಸ್
Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ

ಇತ್ತೀಚಿನ ಸುದ್ದಿ

“ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್ ಜೈಲಿನೊಳಗೆ ಹೋದ

28/07/2021, 18:21

ಮಂಗಳೂರು(reporterkarnatakanews): ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ ‘ನಗರದ ಪೊಲೀಸ್ ಠಾಣೆಗೆ ಆಟೋರಿಕ್ಷಾ ಚಾಲಕ ತನಗೆ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಜನವರಿ ತಿಂಗಳಿನಲ್ಲಿ ಪೋಷಕರ ಜತೆ ಕಂಕನಾಡಿ ನಗರ ಠಾಣೆಗೆ ತಂದೆಯ ಜೊತೆ ದೂರು ನೀಡಲು ಬಂದಿದ್ದಳು.

ಈ ವೇಳೆ ತನಿಖೆ ವೇಳೆ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಮೆಸೇಜ್ ಮಾಡಿ ‘ನೀನು ಎಲ್ಲಿದ್ದಿಯಾ, ಮನೆಯಲ್ಲಿ ಒಬ್ಬನೇ ಇದ್ದೀನಿ, ನಿನ್ನ ಮನೆಯ ಹತ್ತಿರ ರೌಂಡ್ಸ್ ಬಂದಾಗ ಸಿಗುತ್ತೇನೆ ಎಂದು ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಮಂಗಳೂರು ನಗರ ಠಾಣೆಯ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು