ಇತ್ತೀಚಿನ ಸುದ್ದಿ
ಹಲ್ಯಾಳ: ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ; ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ
02/10/2023, 20:53
ಶಿವರಾಯ ಲಕ್ಷಣ್ ಕರಕರಮುಂಡಿ ಬೆಳಗಾವಿ
info.reporterkarnataka@gmail.com
ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ನಿಮಿತ್ತವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ ಅವರು ಶಾಲೆಯ ಎಂಟನೇ ತರಗತಿಯ 67 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಮಂಜುನಾಥ ಹತ್ತಿ ಮಾತನಾಡಿ, ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ತಮ್ಮ ಜೀವನಕ್ಕೂ ಅಳವಡಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡಿ ಶಾಲೆಗೆ ಹಾಗೂ ಗ್ರಾಮಕ್ಕೆ ಹೆಸರು ಬೇಕು ಎಂದರು.
ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ದೀಪಕ್ ಮರಗುಂಡಿ ಮಾತನಾಡಿದ ಮುಂಬರುವ ದಿನಗಳಲ್ಲಿ ಗ್ರಾಮಕ್ಕೆ ಒಂದು ಪದವಿ ಪೂರ್ವ ಕಾಲೇಜಿನ ಅವಶ್ಯಕತೆ ಇದ್ದು ನಮ್ಮ ಗ್ರಾಮದಲ್ಲಿ ಪದವಿಪೂರ್ವ ಕಾಲೇಜನ್ನು ಮಂಜೂರು ಮನವಿ ಮಾಡಲಾಗುವುದು. ಈ ಶಾಲೆಗೆ ಬಡ ವಿದ್ಯಾರ್ಥಿಗಳು ಬರುವುದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಸಮನಾದ ರೀತಿಯಲ್ಲಿ ಬ್ಯಾಗ್ ಕೊಡಿಸುವ ಆಸೆ ನನ್ನದಾಗಿತ್ತು. ಇಂದು ಎಲ್ಲ ವಿದ್ಯಾರ್ಥಿಗಳಿಗೂ ಬ್ಯಾಗ್ ವಿತರಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮುದುಕಣ್ಣ ಸೇಗುಣಿಸಿ, ಉಪಾಧ್ಯಕ್ಷರಾದ ವಿಠ್ಠಲ ಮಂಗಸೂಳಿ, ಮಹದೇವ್ ಜಾಬಗೌಡರ, ಶಶಿಕಾಂತ ದಳವಾಯಿ, ಸಂತೋಷ್ ಕಾಂಬಳೆ, ಮುತ್ತಪ್ಪ ಸನದಿ, ಸಿದ್ದಪ್ಪ ಲೋಕೂರ, ಮುಖಂಡರಾದ ಮಹಾದೇವ್ ತಕತರಾವ ಮತ್ತು ಶಿಕ್ಷಕ ವರ್ಗಹಾಗೂ ಮುದ್ದು ವಿದ್ಯಾರ್ಥಿಗಳು ಹಾಗೂ ಸಮಸ್ತ ಹಲ್ಯಾಳ ಗ್ರಾಮಸ್ಥರು ಉಪಸ್ಥಿತರಿದ್ದರು.