2:28 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ

03/10/2023, 13:27

ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.


ಗಾಂಧಿಯವರ ವಿಚಾರಧಾರೆ ಎಂದಿಗೂ ಸಾರ್ವಕಾಲಿಕ. ಸ್ವಚ್ಛತೆ ಬಗೆಗಿದ್ದ ಕಾಳಜಿ, ಬದ್ಧತೆ ನಮಗೆಲ್ಲ ಮಾದರಿ. ಈ ನಿಟ್ಟಿನಲ್ಲಿ ಈ ದಿವಸ ಏಕ ಬಳಕೆಯ ವಸ್ತುಗಳಾದ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಕಡ್ಡಿಗಳು, ದಿನ ಬಳಸುವ ಪ್ಲಾಸ್ಟಿಕ್ ವಸ್ತುಗಳಾದ ಲೋಟ, ಚೂರಿಗಳು, ಪ್ಯಾಕಿಂಗ್ ಗೆ ಬಳಸುವ ರ್ಯಾಪರ್, ಪ್ಲಾಸ್ಟಿಕ್ ಆಹ್ವಾನ ಪತ್ರಿಕೆ, ಪ್ಲಾಸ್ಟಿಕ್ ಹಾಗೂ ಪಿವಿಸಿ ಬ್ಯಾನರ್ಗಳು ಮೊದಲಾದವುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು.
ದೇಶದಾದ್ಯಂತ ಏಕ‌ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದ್ದು , ಕರ್ನಾಟಕ ಸರ್ಕಾರವು 2016 ರಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಇವತ್ತಿನ ಪ್ಲಾಸ್ಟಿಕ್ ನಿಷೇಧ ರಾಜ್ಯಕ್ಕೆ ಮೊದಲು ಹಾಗೂ ಮಾದರಿ ಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸಸ್ನ ಭಕ್ತ, ಸ್ಥಳೀಯ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಐಇಸಿ ತಜ್ಞ ಡೊಂಬಯ್ಯ ಇಡ್ಕಿದು, ಎಚ್.ಆರ್.ಡಿ ನವೀನ್ , ಜಲ್ ಜೀವನ್ ಮಿಷನ್ ನ ವಿಘ್ನೇಶ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು