ಇತ್ತೀಚಿನ ಸುದ್ದಿ
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ: 2 ವರ್ಷದ ಮಗು ಸೇರಿ ಇಬ್ಬರು ಬಲಿ
03/10/2023, 18:22

ಬೆಂಗಳೂರು(reporterkarnataka.com): ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತಕ್ಕೀಡಾದ ಪರಿಣಾಮ 2 ವರ್ಷದ ಮಗು ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಸಿಂಧು ಎಂಬ ಮಹಿಳೆ ಹಾಗೂ 2 ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಗಾಯಗೊಂಡ ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದ ಪರಿಣಾಮ ಈ ಭೀಕರ ಅಪಘಾತ ಉಂಟಾಗಿದೆ.