2:28 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ

08/10/2023, 11:48

ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮಾಣದ ಲಸಿಕೆಯನ್ನು ನೀಡಲಾಗುವುದು ಎಂದು ಆರ್.ಸಿ.ಎಚ್. ಅಧಿಕಾರಿ ಡಾ.ರಾಜೇಶ್ ಹೇಳಿದರು.
ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದರು.
ಮೂರನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಫಲಾನುಭವಿಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ. ನಿರ್ಧಿಷ್ಟವಾಗಿ ಕ್ರಿಯಾ ಯೋಜನೆಯಲ್ಲಿ ಗುರುತಿಸಿದ ಸ್ಥಳದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುವುದು. ಅಕ್ಟೋಬರ್ ತಿಂಗಳಲ್ಲಿ 6 ದಿನ ಶಿಬಿರ ನಡೆಯಲಿದೆ. ಅ. 9ರಿಂದ 14ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮೂರನೇ ಸುತ್ತಿನಲ್ಲಿ ಆಯೋಜಿಸಲಾಗಿರುವ ಲಸಿಕಾ ಶಿಬಿರಗಳು ಒಟ್ಟು 441, ಲಸಿಕೆಯಿಂದ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಒಟ್ಟು 583, 5 ವರ್ಷದ ಒಳಗಿನ ಒಟ್ಟು ಮಕ್ಕಳು 3,076 ಎಂದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಂಸ್ಥೆ, ನಗರ ಅಭಿವೃದ್ಧಿ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶೂಶ್ರಣಾಧಿಕಾರಿ ಲೀಸ್ಸಿ ಮತ್ತು ತಾಲೂಕು ಆರೋಗ್ಯಧಿಕಾರಿ ಡಾ. ಸುಜಯ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು