6:21 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ ನಿಧನ: 4 ದಶಕಗಳ ಕಲಾ ಸೇವೆಗೆ ಮಂಗಳ

08/10/2023, 19:09

ಕಾರವಾರ(reporterkarnataka.com): ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆ ಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ,,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು. ಅವರು ಪತ್ನಿ,ಪುತ್ರನನ್ನು ಅಗಲಿದ್ದಾರೆ.ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು