2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ ಹಲವು ಹುದ್ದೆಗಳು, ಸದ್ಯದಲ್ಲೇ ಅರ್ಜಿ ಆಹ್ವಾನ

29/07/2021, 00:54

ಬೆಂಗಳೂರು(reporterkarnataka.com)

ರಾಜ್ಯ ಮೋಟಾರು ವಾಹನಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸುವ ಕುರಿತಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ.

ಸದ್ಯದಲ್ಲಿಯೆ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿದ್ಯಾರ್ಹತೆಗೆ ಅನುಸಾರವಾಗಿ ಸಲ್ಲಿಸಬಹುದಾಗಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅವರು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದು, 15 ದಿನಗಳೊಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸುವಂತೆ ತಿಳಿಸಿದ್ದಾರೆ.

ಹುದ್ದೆಗಳ ವಿವರ:
ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ – 1
ಅಪರ ಆಯುಕ್ತರು – 6 ಹುದ್ದೆ
ಜಂಟಿ ಸಾರಿಗೆ ಆಯುಕ್ತರು – 6 ಹುದ್ದೆಗಳು
ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ – 3 ಹುದ್ದೆ
ಪ್ರಾದೇಶಿಕ ಸಾರಿಗೆ ಅಧಿಕಾರಿ – 47
ಹಿರಿಯ ಮೋಟಾರು ವಾಹನ ನಿರೀಕ್ಷಕರು – 214 ಹುದ್ದೆಗಳು
ಮೋಟಾರು ವಾಹನ ನಿರೀಕ್ಷಕರು – 430
ಪ್ರಥಮ ದರ್ಜೆ ಸಹಾಯಕರು – 435
ಶೀಘ್ರಲಿಪಿಗಾರರು – 50 ಹುದ್ದೆ
ದ್ವಿತೀಯ ದರ್ಜೆ ಸಹಾಯಕರು – 545 ಹುದ್ದೆ ಚಾಲಕರು – 141
4 ವರ್ಷ ಲಘು ವಾಹನ ಚಾಲನೆ ಅನುಭವ ಸೇವಕರು – 343, ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ

ಈ ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ. ಅಲ್ಲದೇ ಕೊನೆಯ ದಿನಾಂಕ, ಅರ್ಜಿ ಶುಲ್ಕ, ವಯೋಮಿತಿ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು