ಇತ್ತೀಚಿನ ಸುದ್ದಿ
ಆಂಬುಲೆನ್ಸ್,- ಬೈಕ್ ಡಿಕ್ಕಿ: ಇಬ್ಬರು ಸವಾರರಿಗೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು
09/10/2023, 15:12
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲ್ಲೂಕಿನ ಸಬ್ಬೆನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕ್ ಮತ್ತು ಆಂಬುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರಿಗೂ ತೀವ್ರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರಿಗೆ ರೋಗಿಯನ್ನು ಬಿಟ್ಟು ಮಂಗಳೂರಿಗೆ ಹೋಗುತ್ತಿದ್ದ ಆಂಬುಲೆನ್ಸ್ ಮತ್ತು ಬೈಕ್ ಡಿಕ್ಕಿ ಹೊಡೆದಿದೆ.
ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಬೇಲೂರು ಮೂಲದ ಇಬ್ಬರು ಗಾಯಗೊಂಡಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.