ಇತ್ತೀಚಿನ ಸುದ್ದಿ
ಚಿತ್ರದುರ್ಗದಲ್ಲಿ ಬಾಲಕಿಯ ಅತ್ಯಾಚಾರ ನಡೆಸಿ ಕೊಲೆ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ, 20 ಲಕ್ಷ ರೂ. ಪರಿಹಾರಕ್ಕೆ ಆಗ್ರಹ
29/07/2021, 10:57

ಹುಬ್ಬಳ್ಳಿ(reporterkarnatakanews): ಚಿತ್ರದುರ್ಗದ ಭರಮಸಾಗರ ತಾಲೂಕಿನ ಇಸಮುದ್ರ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಖಂಡಿಸಿ ಧಾರವಾಡದ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಬಯಲು ಶೌಚಾಲಯಕ್ಕೆ ತೆರಳಿದ 13ರ ಹರೆಯದ ಬಾಲಕಿ ಶಶಿಕಲಾ ಉಪ್ಪಾರ ಎಂಬಾಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಜುಲೈ 23ರಂದು ಈ ಘಟನೆ ನಡೆದಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು.
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ, ಕುಟುಂಬಕ್ಕೆ ಒಂದು ಸರಕಾರಿ ನೌಕರಿ ಮತ್ತು 2 ಎಕರೆ ಜಮೀನು ನೀಡುವಂತೆ ಸರಕಾರವನ್ನು ಒತ್ತಾಯಿಸಲಾಯಿತು.