6:06 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ: ಬೆಸೆಂಟ್ ಪ್ರಿನ್ಸಿಪಾಲ್ ಡಾ. ಪ್ರವೀಣ್ ಕುಮಾರ್

10/10/2023, 22:02

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗ ಬೆಸೆಂಟ್ ಮಹಿಳಾ ಕಾಲೇಜು ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ ಕಾರ್ಯಕ್ರಮವವು ಬೆಸೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಮಾರ್ ಕೆ. ಸಿ. ಅವರು ವಹಿಸಿಕೊಂಡು ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ. ಆ ರೀತಿ ಬದುಕಿದಾಗಲೇ ಜೀವನದ ಸಾರ್ಥಕ್ಯ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾರಂತರ ಬದುಕು ಬರಹದ ಬಗ್ಗೆ ನಾರಾಯಣ ಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ರಾಜಶೇಖರ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ಡಾ. ಮಾಧವ ಎಂ. ಕೆ. ಹಾಗೂ ಕಸಾಪ ಕಾರ್ಯದರ್ಶಿಗಳಾದ ಸುಬ್ರಾಯ ಭಟ್, ಅರುಣಾ ನಾಗರಾಜ್ ಹಾಗು ಸನತ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು