12:16 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಗೆಳೆಯರ ಜತೆ ದೇವರ ಮನೆಗೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿ ಯುವಕ ಮನೆ ಸಮೀಪದ ಮೋರಿ ಬಳಿ ಪತ್ತೆ; ಕುಡಿತದ ಮತ್ತಿನಲ್ಲಿ ನಡೆದ ಗಲಾಟೆ ಸುಖಾಂತ್ಯ

11/10/2023, 11:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆಗೆ ಬೆಳ್ತಂಗಡಿಯಿಂದ ಪ್ರವಾಸಕ್ಕೆ ಬಂದಿದ್ದ ಗೆಳೆಯರ ಗುಂಪಿನಿಂದ ನಾಪತ್ತೆಯಾಗಿದ್ದ ಯುವಕ ಪತ್ತೆಯಾಗಿದ್ದಾನೆ.

ದೇವರ ಮನೆಗೆ ಪ್ರಸಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ, ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆ ಕಾರಿನಲ್ಲಿ ಹೋಗಿದ್ದರು. ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂತಿರುಗುವಾಗ ಕುಡಿದ ಮತ್ತಿನಲ್ಲಿದ್ದ ಯುವಕರ ಮಧ್ಯದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರು. ನಂತರ‌ ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ. ಯುವಕರು ಕುಡಿದ ಮತ್ತಿನಲ್ಲಿ ಮಾಡಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು