12:04 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದುರ್ವರ್ತನೆ: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿಗಳ ಸಂಘ ಖಂಡನೆ

11/10/2023, 20:25

ಬೆಂಗಳೂರು(reporterkarnataka.com): ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ವಲಯ ಅರಣ್ಯ ಅಧಿಕಾರಿ ಗಳ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದುರ್ವರ್ತನೆಯನ್ನು ಕರ್ನಾಟಕ ವರಣ್ಯ ಅರಣ್ಯಾಧಿಕಾರಿಗಳ ಸಂಘ ಖಂಡಿಸಿದೆ.

ಮಂಗಳೂರು ವಿಭಾಗದ, ಉಪ್ಪಿನಂಗಡಿ ವಲಯದ, ಬೆಳ್ತಂಗಡಿ ತಾಲ್ಲೂಕಿನ, ಕಳೆಂಜ ಗ್ರಾಮದ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಮಯದಲ್ಲಿ ಬೆಳ್ತಂಗಡಿ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಯನ್ನು ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿರುವುದು ಖಂಡನೀಯ, “ಆ” ಅವಾಚ್ಯ ಶಬ್ದದ ಬಗ್ಗೆ ಕನಿಷ್ಠ ಸೌಜನ್ಯಕ್ಕಾದರೂ ಕ್ಷಮೆ ವ್ಯಕ್ತಪಡಿಸದಿರುವುದು ಗೌರವಾನ್ವಿತ ಶಾಸಕರಿಗೆ ಶೋಭೆತರುವಂತಹುದಲ್ಲ, ಈ ಕೃತ್ಯವನ್ನು ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಯವರ ಸಂಘ (೨) ಬೆಂಗಳೂರು ಸಂಘವು ಕಠಿಣ ಪದಗಳಲ್ಲಿ ಖಂಡಿಸಿದೆ.
ಅಧಿಕಾರಿಗಳಾಗಲೀ, ಸಾರ್ವಜನಿಕರಾಗಲೀ, ಜನಪ್ರತಿನಿಧಿಗಳಾಗಲೀ ಗೌರವಾನ್ವಿತ ಶಾಸಕರುಗಳಾಗಲೀ ಈ ನೆಲದ ಕಾನೂನನ್ನು ಪಾಲಿಸಬೇಕಾಗಿರುತ್ತದೆ. ಕಾನೂನಿಗಿಂತ ಯಾರೂ ಮಿಗಿಲಾಗಿರುವುದಿಲ್ಲ. ಒಂದು ವೇಳೆ ವಲಯ ಅರಣ್ಯಾಧಿಕಾರಿಗಳು ಏನೇ ಕರ್ತವ್ಯಚ್ಯುತಿ ಮಾಡಿದ್ದರೂ ಅದನ್ನು ಕಾನೂನಿನ ವ್ಯಾಪ್ತಿಯಲ್ಲೇ ಬಗೆಹರಿಸಿಕೊಳ್ಳಬೇಕಾಗಿರುವುದು ಶಾಸಕರಿಗೆ ತಿಳಿಯದೇ ಇರುವ ವಿಷಯವೇನಲ್ಲ. ಆಗಿದ್ದಾಗ್ಯೂ ಮಾನ್ಯ ಗೌರವಾನ್ವಿತ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಗೆ ತನ್ನ ಶಾಸನ ಬದ್ಧ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕರ್ತವ್ಯಕ್ಕೆ ಅಡ್ಡಿಉಂಟುಮಾಡಿ ಅವಾಚ್ಯವಾಗಿ ನಿಂಧಿಸಿರುವುದು ಅವರ ಘನತೆಗೆ ತಕ್ಕದ್ದಾಗಿರುವುದಿಲ್ಲ. ಈ ಘಟನೆಯನ್ನು ಸಂಘವು ಖಂಡಿಸುತ್ತಾ ಅರಣ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯವರಿಗೆ ಕಾನೂನಿನ ಅನ್ವಯ ಸಾರ್ವಜನಿಕ ಕೆಲಸ ನಿರ್ವಹಿಸಲು ನೈತಿಕ ಸೈರ್ಯವನ್ನು ಸಂಘವು ನೀಡುತ್ತದೆ. ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಹೋರಾಟಕ್ಕೂ ಸಹ ಸಂಘವು ಸಿದ್ಧವಿರುತ್ತದೆ ಎಂದು ಈ ಮೂಲಕ ಸಂಘವು ಆಗ್ರಹಿಸುತ್ತದೆ ಎಂದು ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ASSOCIATION ವಲಯ ಅರಣ್ಯ ಅಧಿಕಾರಿಗಳ ಸಂಘ(ರಿ)ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು