10:06 AM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಗೆ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿ: ಬೆಂಗಳೂರಿನಲ್ಲಿ ರಾಜ್ಯಪಾಲರು ಪ್ರದಾನ

11/10/2023, 21:39

ಬೆಂಗಳೂರು(reporterkarnataka.com): ರಾಜ್ಯ ರಾ.ಸೇ.ಯೋಜನಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ನೀಡುವ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸೇವೆಯನ್ನು ಪರಿಗಣಿಸಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.
ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ
ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅತ್ಯುತ್ತಮ ರಾಸೇ ಯೋಜನಾ ಘಟಕ/ಯೋಜನಾಧಿಕಾರಿ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ಮಂಗಳೂರು ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವ್ಯಾಪ್ತಿಯ ಕಾಲೇಜುಗಳ ಪೈಕಿ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿಯನ್ನು
1.ಡಾ. ಲಕ್ಷ್ಮೀನಾರಾಯಣ ಕೆ.ಎಸ್‌.( ಎಸ್‌.ಡಿ.ಎಂ.ಕಾಲೇಜು, ಉಜಿರೆ) ಹಾಗೂ
2. ಸೀಮಾ ಪ್ರಭು ಎಸ್. (ಕೆನರಾ ಕಾಲೇಜು, ಮಂಗಳೂರು) ಗಳಿಸಿದ್ದಾರೆ.


ಸ್ವಯಂ ಸೇವಕ ಪ್ರಶಸ್ತಿಯನ್ನು ಅಭಿನ್ ಬಂಗೇರ (ತೃತೀಯ ಬಿಕಾಂ, ಕೆನರಾ ಕಾಲೇಜು, ಮಂಗಳೂರು) ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು