1:52 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

12/10/2023, 15:45

ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ.
ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ಧಾರೆ.
ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ 10 ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು