7:55 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 262 ಮಂದಿ ರೌಡಿಗಳ ಪರೇಡ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಾಕಿ ಖಡಕ್ ಎಚ್ಚರಿಕೆ

12/10/2023, 21:21

ಮಂಗಳೂರು(reporterkarnataka.com): ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ
ಸಕ್ರೀಯ ರೌಡಿಗಳ ಪರೇಡ್‌ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಗುರುವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.


ಪರೇಡ್‌ನಲ್ಲಿ ಒಟ್ಟು 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿ ಅವರು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೊಲೀಸ್ ಆಯುಕ್ತರು ಉಪದೇಶಿಸಿದರು. ಇದಲ್ಲದೇ ರೌಡಿಗಳಿಗೆ ಇನ್ನು ಮುಂದೆ ಯಾವುದಾದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದೆಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.
ಈ ಪರೇಡ್‌ನಲ್ಲಿ ಸಿದ್ದಾರ್ಥ ಗೋಯಲ್ ( ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ), ಬಿ.ಪಿ. ದಿನೇಶ್ ಕುಮಾರ್ (ಡಿಸಿಪಿ ಅಪರಾಧ ಮತ್ತು ಸಂಚಾರ), ನಗರದ ಎಲ್ಲಾ ಎಸಿಪಿ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು