1:34 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ. ಟಿ. ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ

13/10/2023, 12:49

ಕಾರ್ಕಳ(reporterkarnataka.com): ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 13ನೇ ಅಕ್ಟೋಬರ್ 2023 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಂದೀಪ್ ಪಿ. ಟಿ. ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ.
ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದಾರೆ. ಈಗ ಇಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಅಪರಾಹ್ನ ಗಂಟೆ 3:00 ರಿಂದ 5:00 ರವರೆಗೆ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ , ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ , ಹ್ರದ್ರೋಗ , ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ , ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್ , ಚರ್ಮ, ಮಾನಸಿಕ ಆರೋಗ್ಯ , ಸಂತಾನೋತ್ಪತ್ತಿ ಔಷದಿ, ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.
ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಮಾತನಾಡಿ, “ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಸಂದೀಪ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ವಿಭಾಗದ ಸೇರ್ಪಡೆಯು, ಸಕಾಲದಲ್ಲಿ ರೋಗ ನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ” ಎಂದು ಹೇಳಿದರು.

ಅಪಾಯಿಂಟ್‌ಮೆಂಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು