ಇತ್ತೀಚಿನ ಸುದ್ದಿ
ನಾಪತ್ತೆಯಾಗಿದ್ದ ಮೂಡುಬೆಳ್ಳೆಯ ಯುವತಿಯ ಶವ ಪಡುಬೆಳ್ಳೆಯ ನದಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ
13/10/2023, 16:03

ಕಾರ್ಕಳ(reporterkarnataka.com): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡುಬೆಳ್ಳೆ ಕೊಂಗಿಬೈಲಿನ ಯುವತಿಯೊಬ್ಬಳ ಶವ ಪಾಪನಾಶಿನಿ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22)
ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು.
ಅ. 9ರಂದು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬರಲಿಲ್ಲ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಬಿಕಾಂ ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜು ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂಗೆ ಸುಮಾರು 4 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ವಾರದ ಹಿಂದೆ ಕೆಲಸಬಿಟ್ಟಿದ್ದರು.
ವಿನಿತಾ ನಾಪತ್ತೆಯಾದ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯವರು ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು.
ಇದೀಗ ಮೃತದೇಹ ಮೃತದೇಹ
ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಪಾಪನಾಶಿನಿ ನದಿ ಗುಂಡಿಯಲ್ಲಿ ಪತ್ತೆಯಾಗಿದೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದೆ.