2:23 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ

13/10/2023, 22:38

ಟೆಲ್ ಅವಿವ್‌(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ಇಂದು ಸುರಕ್ಷಿತವಾಗಿ ಭಾರತಕ್ಕೆ ಆಗಮಿಸಿತು.
212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್​ನಿಂದ ದೆಹಲಿಗೆ ಬಂದಿಳಿದಿದೆ. ಈ ನಡುವೆ ಇಸ್ರೇಲ್​ ಹಾಗೂ ಹಮಾಸ್​ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಮಾನವು ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು 211 ವಯಸ್ಕರು ಮತ್ತು ಒಂದು ಶಿಶುವನ್ನು ಭಾರತಕ್ಕೆ ಕರೆದು ತಂದಿದೆ.
ಇಸ್ರೇಲ್​ ಮೇಲೆ ಕಳೆದ ಶನಿವಾರ ಹಮಾಸ್​ ಉಗ್ರರು ನಡೆಸಿದ ದಾಳಿಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಂತರದ ಇಸ್ರೇಲಿ ಪ್ರತೀಕಾರಕ್ಕೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯು 2,500 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತು. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು