9:42 PM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ

17/05/2021, 16:20

ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭಾನುವಾರ ಬ್ಯ್ಲಾಕ್ ಫಂಗಸ್ ಲಕ್ಷಣಗಳು ಕಂಡುಬಂದಿದ್ದು, ಆದರೆ ಇದು ಇನ್ನು ದೃಢಪಟ್ಟಿಲ್ಲ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಬ್ಯ್ಲಾಕ್ ಫಂಗಸ್ ಕುರಿತು ಶೀಘ್ರದಲ್ಲೇ ತಜ್ಞರ ಸಮಿತಿ ರಚಿಸಲಾಗುವುದು. ಈ ಸಮಿತಿ ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶನ ನೀಡಲಿದೆ.  ಕೇಂದ್ರ ಸರಕಾರ ಇದಕ್ಕೆ ಬೇಕಾಗಿರುವ ಆಂಪೊಟೆರಿಸಿನ್ ಔಷಧವನ್ನು ನೀಡಲಿದೆ. 20 ಸಾವಿರ ಡೋಸ್ ಗೆ ಮನವಿ ಮಾಡಲಾಗಿದೆ. ಬ್ಯ್ಲಾಕ್ ಫಂಗಸ್ ಗೆ 7 ವಾರಗಳ ನೀಡಬೇಕಾಗಿದ್ದು, ಇದಕ್ಕೆ 20ರಿಂದ 3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಸಿಎಂ ಜೊತೆ ಚರ್ಚಿಸಲಾಗುವುದು  ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು