9:43 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾಸರಗೋಡು: ತಲೆಯನ್ನು ಗೋಡೆಗೆ ಬಡಿದು ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ; ಆರೋಪಿ ಬಂಧನ

15/10/2023, 13:01

ಕಾಸರಗೋಡು(reporterkarnataka.com): ಹೆತ್ತಬ್ಬೆಯನ್ನೇ ಪುತ್ರ ಕೊಂದ ಅಮಾನುಷ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ.
ಅತಿಯಾದ ಮೊಬೈಲ್ ಬಳಕೆಯನ್ನು ಪ್ರಶ್ನಿಸಿದ್ದೇ ಹೆತ್ತ ತಾಯಿಯ ಪ್ರಾಣಕ್ಕೆ ಕುತ್ತು ತಂದಿದೆ.
ಮೃತಪಟ್ಟ ಮಹಿಳೆಯನ್ನು ಕಣಿಚಿರದ ರುಕ್ಮಣಿ (63) ಎಂದು ಗುರುತಿಸಲಾಗಿದೆ.
ರುಕ್ಮಣಿ ಅವರ ತಲೆಯನ್ನು ಗೋಡೆಗೆ ಬಡಿದು ಪುತ್ರ ಸುಜಿತ್ ಗಾಯಗೊಳಿಸಿದ್ದ. ಪ್ರಕರಣ ನಡೆದ ಕೂಡಲೇ ಆತನ ಬಂಧನವೂ ಆಗಿತ್ತು. ಮಗನಿಂದ ಹಲ್ಲೆಗೆ ಒಳಗಾಗಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅತಿಯಾಗಿ ಮೊಬೈಲ್ ಬಳಕೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿಯ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು